ಕರ್ನಾಟಕದ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​….!

ಬೆಂಗಳೂರು 

   ಕರ್ನಾಟಕದಾದ್ಯಂತ ಇಂದು ಭಾರಿ ಮಳೆ ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಲ್ಲಿ ಇಂದು ಗೂಡ ಗುಡುಗು ಸಹಿತ ಮಳೆಯಾಗಲಿದೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರಲಿದೆ.

 
  ಬೆಂಗಳೂರು, ಕೆಆರ್​ಪೇಟೆ, ಹಿರಿಯೂರು, ಟಿಜಿ ಹಳ್ಳಿ, ಮೈಸೂರು, ಗುಬ್ಬಿ, ಬೆಳ್ತಂಗಡಿ, ಸುಳ್ಯ, ನಾಗಮಂಗಲ, ಗೌರಿಬಿದನೂರು, ತೊಂಡೆಬಾವಿ, ಕೃಷ್ಣರಾಜಸಾಗರ, ಉಪ್ಪಿನಂಗಡಿ, ಮದ್ದೂರು, ಬಾಳೆಹೊನ್ನೂರು, ಕೊಟ್ಟಿಗೆಹಾರ, ಚಿತ್ರದುರ್ಗ, ಕುಣಿಗಲ್​ನಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
  ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
  ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 40.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
   ಧಾರವಾಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link