ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರು :

    ದೀಪಾವಳಿ ಹತ್ತಿರ ಬಂದರೂ ಮಳೆ ಕಡಿಮೆಯಾಗುವ ನಿರೀಕ್ಷೆ ಕಾಣುತ್ತಿಲ್ಲ, ವಾರಗಟ್ಟಲೆ ಬಿಡುವು ಪಡೆದಿದ್ದ ಮಳೆ ಮತ್ತೆ ಗುಡುಗು, ಸಿಡಿಲನೊಂದಿಗೆ ಅಬ್ಬರ ಶುರು ಮಾಡಿದೆ. ಕೊಪ್ಪಳ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

    ಗುಬ್ಬಿ, ರಾಮನಗರ, ಮಧುಗಿರಿ, ಕೊಳ್ಳೇಗಾಲ, ಬಸವನಬಾಗೇವಾಡಿ, ಇಂಡಿ, ಕುಕನೂರು, ಕೃಷ್ಣರಾಜಸಾಗರ, ಗೌರಿಬಿದನೂರು, ಕೋಲಾರ, ಬೈಲಹೊಂಗಲ, ಮುದಗಲ್, ನೆಲೋಗಿ, ಚಾಮರಾಜನಗರ, ರಾಯಲ್ಪಾಡು, ಎಂಎಂ ಹಿಲ್ಸ್​, ಖಜೂರಿ, ಶಹಾಪುರ, ಸಿಂದಗಿ, ಕೆಂಭಾವಿ, ಸಿರಾ, ಮದ್ದೂರು, ವೈಎನ್ ಹೊಸಕೋಟೆ, ನಂಜನಗೂಡಿನಲ್ಲಿ ಮಳೆಯಾಗಿದೆ.

    ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 33.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಕೊಪ್ಪಳದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link