ಕಾಂಗ್ರೆಸ್​​​ನಿಂದ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಸ್ಫೋಟಕ ಹೇಳಿಕೆ

ಬೆಂಗಳೂರು

   ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಟಿಕೆಟ್ ಆಫರ್ ಬಂದಿದೆಯೇ ಎಂಬ ಬಗ್ಗೆ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದರೆ, ಬಿಜೆಪಿಯಿಂದಲೇ ಅವರಿಗೆ ಟಿಕೆಟ್ ದೊರೆಯುತ್ತದೆಯೇ? ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ? ಅಥವಾ ಕಾಂಗ್ರೆಸ್ ಸೇರುತ್ತಾರಾ ಎಂಬ ಕುತೂಹಲ ಇದೆ.

   ಯೋಗೇಶ್ವರ್​​ಗೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧಿಸುವಂತೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಫರ್ ನೀಡಿದ್ದರು. ಆದರೆ, ಅದನ್ನು ಯೋಗೇಶ್ವರ್ ತಿರಸ್ಕರಿಸಿದ್ದಾರೆ. ಹೀಗಾಗಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಕೆರಳಿಸಿದೆ. ಇದಕ್ಕನುಗುಣವಾಗಿಯೇ ಕಾಂಗ್ರೆಸ್ ಕೂಡ ರಣತಂತ್ರ ರೂಪಿಸುತ್ತಿದೆ.

Recent Articles

spot_img

Related Stories

Share via
Copy link
Powered by Social Snap