ಬೆಂಗಳೂರು
ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಿಖರವಾದ ವಿವರವನ್ನು ಒಂದು ತಿಂಗಳಲ್ಲಿ ಸರ್ಕಾರ ಸಂಗ್ರಹಿಸಬೇಕು. ನಂತರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಲಹೆ ನೀಡಿದ್ದಾರೆ.
ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಆಗಿರುವ ಬೆಳೆ ನಷ್ಟದ ಪ್ರಮಾಣವನ್ನು ತಿಳಿದುಕೊಳ್ಳಬೇಕು. ಎಷ್ಟು ರೈತರು ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ ಎಂಬುದನ್ನೂ ನಾವು ತಿಳಿದುಕೊಳ್ಳಬೇಕು. ಎಲ್ಲಾ ವಿವರಗಳೊಂದಿಗೆ ನಾವು ಮೋದಿ ಅವರನ್ನು ಭೇಟಿ ಮಾಡಿ, ಬರ ಪರಿಸ್ಥಿತಿಯನ್ನು ವಿವರಿಸಬೇಕು ಎಂದರು.
ಈ ನಿಟ್ಟಿನಲ್ಲಿ ನಾವು ಸರ್ಕಾರದ ಪರವಾಗಿ ನಿಲ್ಲುತ್ತೇವೆ. ಆದರೆ, ಸರ್ಕಾರ ಅದನ್ನು ಮಾಡದೆ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
