ನವದೆಹಲಿ:
ಐದನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜನರಿಗೆ ಕರೆ ನೀಡಿದ್ದಾರೆ. ಒಂದು ಮತವು ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಎಂದು ಹೇಳಿದ್ದಾರೆ.
ಐದನೇ ಹಂತದಲ್ಲಿ ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಗಳಂತಹ ಹಲವಾರು ಪ್ರಮುಖ ನಾಯಕರ ಚುನಾವಣಾ ಭವಿಷ್ಯವನ್ನು ನಿರ್ಧರಿಸಲಿದೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, ನಿಮ್ಮ ಒಂದು ಮತದಿಂದ ಪ್ರತಿ ಬಡಕುಟುಂಬದ ಮಹಿಳೆಯ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರು. ಜಮೆ ಆಗಲಿದೆ. ಪ್ರತಿಯೊಬ್ಬ ನಾಗರಿಕ 25 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಲಿದ್ದಾನೆ. ಯುವಕರು 30 ಲಕ್ಷ ಸರ್ಕಾರಿ ಹುದ್ದೆ ಪಡೆಯಲಿದ್ದಾರೆ. ಯುವಕರು ವರ್ಷಕ್ಕೆ 1 ಲಕ್ಷ ರು. ಅಪ್ರೆಂಟೀಸ್‌ಷಿಪ್ ಪಡೆಯಲಿದ್ದಾರೆ. ಎಸ್‌ಸಿ, ಎಸ್‌ಟಿ,ಒಬಿಸಿ ಜನರಿಗೆ ಸ್ಥಾನಮಾನ ಸಿಗಲಿದೆ. ನಿಮ್ಮ ಒಂದು ಮತ ದೇಶದ ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಲಿದೆ’ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಅತ್ಯಧಿಕ ಪ್ರಮಾಣದಲ್ಲಿ ಮತ ಹಾಕುವಂತೆ ಮತದಾರರಿಗೆ ಅವರು ಕರೆ ನೀಡಿದ್ದಾರೆ. ದೇಶದ ಜನತೆ ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ ಮಾಡಿದರು. ನಿಮ್ಮ ಒಂದು ಮತವು ದೇಶವನ್ನು ಹಣದುಬ್ಬರ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಗೊಳಿಸುತ್ತದೆ ಮತ್ತು ದೇಶವನ್ನು ಬಲಪಡಿಸುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ
