ಕಾಂಗ್ರೆಸ್‌ ನಿಂದ ʼಯುವನಿಧಿ’ ಗ್ಯಾರಂಟಿ ಕಾರ್ಯಕ್ರಮವನ್ನು ಘೋಷಣೆ

ಬೆಂಗಳೂರು

    ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಣೋತ್ಸಾಹದಿಂದ ಮುನ್ನಡೆ ಯುತ್ತಿದ್ದು, ಬೆಳಗಾವಿಯ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುರುಪು ತುಂಬಿದರು. ಇದೇ ಸಂದರ್ಭದಲ್ಲಿ ಚುನಾವಣೆಗೆ 4ನೇ ‘ಯುವನಿಧಿ’ ಗ್ಯಾರಂಟಿ ಕಾರ್ಯಕ್ರಮವನ್ನು ಘೋಷಿದರು.

    ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಿ ಪ್ರಚಂಡ ಜಯಗಳಿಸಿ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು. ಚುನಾವಣೆ ಸಮಯದಲ್ಲಿ ನೀವು ಯಾವ ಜಿಲ್ಲೆಗೆ ಕರೆಯುತ್ತೀರೋ ಅಲ್ಲಿಗೆ ನಾನು ಬರಲು ಸಿದ್ಧ. ನಾವೆಲ್ಲರೂ ಸೇರಿ ಬಿಜೆಪಿಯನ್ನು ಮಣಿಸೋಣ ಎಂದು ಕರೆ ನೀಡಿದರು. ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ಪ್ರತಿ ಪಧವಿಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವವರಿಗೆ 1500 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ. ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

   ಕೆಲ ತಿಂಗಳ ಹಿಂದೆ ಕರ್ನಾಟಕದ ಮೂಲಕ ಭಾರತ ಜೋಡೋ ಯಾತ್ರೆ ಸಾಗಿತ್ತು. ಈ ಯಾತ್ರೆ ಸಂದರ್ಭದಲ್ಲಿ ಎಲ್ಲ ವರ್ಗದ ಜನ ಅಭೂತಪೂರ್ವ ಬೆಂಬಲ ನೀಡಿ ನಮಗೆ ಶಕ್ತಿ ತುಂಬಿದ್ದಿರಿ, ಯಾತ್ರೆ ಯಶಸ್ಸುಗೊಳಿಸಿದ್ದೀರಿ. ಇಡೀ ದೇಶಕ್ಕೆ ಈ ಯಾತ್ರೆ ಸಂದೇಶ ರವಾನಿಸಿತ್ತು. ಈ ದೇಶ ಎಲ್ಲರಿಗೂ ಸೇರಿದ್ದು, ದೇಶ ಅಧಾನಿ ಸ್ವತ್ತಲ್ಲ. ಈ ದೇಶ ರೈತರು, ಯುವಕರು, ಬಡವರಿಗೆ ಸೇರಿದ ದೇಶ ಎಂದರು.

   ಯುವ ಸಮೂಹದ ಕರತಾಡನದ ಮೂಲಕ ಉತ್ಸಾಹಭರಿವಾಗಿ ಮಾತನಾಡಿದ ಅವರು, ನಮ್ಮ ಯಾತ್ರೆಯಲ್ಲಿ ದೊಡ್ಡ ರಥ ಇರಲಿಲ್ಲ, ಎಲ್ಲರೂ ಸಮಾನರಾಗಿ ಹೆಜ್ಜೆ ಹಾಕುತ್ತಿದ್ದರು. ಈ ಯಾತ್ರೆ ಎಲ್ಲರಿಗೂ ಭಾತೃತ್ವ ಸಂದೇಶ ನೀಡಿತ್ತು. ರಾಜ್ಯದಲ್ಲಿ ಸಿಕ್ಕ ಬೆಂಬಲ ಎಲ್ಲೆಡೆ ಸಿಕ್ಕಿತ್ತು. ದ್ವೇಷದ ಮಾರುಕಟ್ಟೆಯಲ್ಲಿ ಲಕ್ಷಾಂತರ ಮಂದಿ ಪ್ರಿತಿಯ ಅಂಗಡಿ ತೆರೆದಿದ್ದಾಗಿ ತಿಳಿಸಿದರು.

   ಈ ಭಾಗದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಯಾತ್ರೆ ಸಮಯದಲ್ಲಿ ಯುವಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿದೆ. ಕೇವಲ ಯುವಕರು ಮಾತ್ರವಲ್ಲ ರಾಜ್ಯ ಸರ್ಕಾರ ದೇಶದ ಅತ್ಯಂತ ಭ್ರಷ್ಟ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಎಲ್ಲ ವರ್ಗದವರು ಹೇಳಿದ್ದಾರೆ. ಮೈಸೂರು ಸಾಬೂನು ಕಾರ್ಖಾನೆ ನಿಗಮದಲ್ಲಿ ಹಗರಣ ನಡೆದು ಶಾಸಕನ ಪುತ್ರ ಸಿಕ್ಕಿಬಿದ್ದಾಗ 8 ಕೋಟಿ ನಗದು ಸಿಗುತ್ತದೆ. ಸರ್ಕಾರ ಅವರ ರಕ್ಷಣೆ ಮಾಡುತ್ತದೆ. ಪಿಎಸ್‌ಐ ನೇಮಕಾತಿ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಎಲ್ಲ ಆರೋಪ ಲಕ್ಷಾಂತರ ಯುವಕರ ದೂರಾಗಿದೆ ಎಂದರು.

   ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡುತ್ತಾ ದೇಶದ ಎಲ್ಲ ವ್ಯಾಪಾರ ವ್ಯವಹಾರ ಅದಾನಿ ಅವರಿಗೆ ನೀಡಲಾಗುತ್ತಿದೆ. ಬಂದರು, ವಿಮಾನ ನಿಲ್ದಾಣ, ರಸ್ತೆ ಎಲ್ಲವೂ ದೊರೆತಿದೆ. ಯಾತ್ರೆ ಸಮಯದಲ್ಲಿ ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡಿದ್ದರು. ಅವರ ಕಷ್ಟಕ್ಕೆ ಪರಿಹಾರ ನೀಡಲು ಗೃಹಲಕ್ಷ್ಮಿ  ಯೋಜನೆ ಮೂಲಕ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎಂದರು.

 

Recent Articles

spot_img

Related Stories

Share via
Copy link
Powered by Social Snap