ಬೆಂಗಳೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಘೋಷ ವಾಕ್ಯದಲ್ಲಿ ಕಾರ್ಯಕ್ರಮ ಆಯೋಜಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಒಬ್ಬ ಯುವಕ ಮತ್ತು ಓರ್ವ ಯುವತಿ ಜತೆಯಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ








